ಇದೇ ವೇಳೆ, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಇರಾನ್ನೊಂದಿಗೆ ಭಾರತದ ವ್ಯಾಪಾರ ವಹಿವಾಟಿನ ವಲಯವನ್ನು ವಿಸ್ತರಿಸಿ, ವೈವಿಧ್ಯಮಯಗೊಳಿಸುವ ಬಯಕೆಯನ್ನು ವ್ಯಕ್ತಪಡಿಸಿದರು.
ಬಿಷ್ಕೆಕ್ನಲ್ಲಿ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾದೆ. ವಿವಿಧ ಕ್ಷೇತ್ರಗಳಲ್ಲಿ ಇರಾನ್ನೊಂದಿಗಿನ ಭಾರತದ ದೀರ್ಘಕಾಲದ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆ ಎಂದು ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ನಮ್ಮ ವ್ಯಾಪಾರ ವಹಿವಾಟಿನ ವ್ಯಾಪ್ತಿಯನ್ನು ವಿಸ್ತರಿಸಿ, ವೈವಿಧ್ಯಮಯಗೊಳಿಸಲು ನಾವು ಬಯಸುತ್ತೇವೆ. ಈ ಪ್ರದೇಶದಲ್ಲಿ ಪ್ರಸ್ತುತ ಇರುವ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದೆವು. ಶಾಶ್ವತ ಶಾಂತಿ ಖಚಿತಪಡಿಸುವ ಉದ್ದೇಶದ ಎಲ್ಲ ಪ್ರಯತ್ನಗಳಿಗೆ ಭಾರತ ನಿರಂತರ ಬೆಂಬಲ ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


