ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿನ್ನೆ ಶನಿವಾರ ಮುಂಬೈಯಲ್ಲಿ ಶಿವಸೇನೆ ಯುಬಿಟಿ ಬಣದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಅವರ ಮಾತೋಶ್ರೀ ನಿವಾಸದಲ್ಲಿ ಭೇಟಿ ಮಾಡಿದರು.
ಇತ್ತೀಚೆಗೆ ಶಿವಸೇನೆ (UBT) ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಪಕ್ಷದ ಸಂಸದೀಯ ಸಭೆಗೆ ಆರು ಲೋಕಸಭಾ ಸದಸ್ಯರು ಗೈರಾಗಿದ್ದರಿಂದ ಪಕ್ಷದೊಳಗೆ ಉದ್ವಿಗ್ನತೆ ಉಂಟಾಗಿತ್ತು.
ಈ ಭೇಟಿಯಲ್ಲಿ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ, ಯುವಸೇನೆ ಮುಖ್ಯಸ್ಥ ಆದಿತ್ಯ ಠಾಕ್ರೆ ಹಾಗೂ ಸಂಸದ ಸಂಜಯ್ ರಾವತ್ ಉಪಸ್ಥಿತರಿದ್ದರು.
ಡಿಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಅವರ ಕುಟುಂಬದವರನ್ನು ಮತ್ತು ಸಂಸದ ಸಂಜಯ್ ರಾವತ್ ಅವರನ್ನು ಮುಂಬೈಯಲ್ಲಿ ಭೇಟಿ ಮಾಡಿದ್ದು ಸಂತೋಷ ಉಂಟುಮಾಡಿತು. ಸಾರ್ವಜನಿಕ ಹಿತಾಸಕ್ತಿಯ ಹಲವು ವಿಷಯಗಳ ಕುರಿತು ಆತ್ಮೀಯವಾಗಿ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.


