ನವದೆಹಲಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಆರೋಪದ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಈ ಧರಣಿ ಶನಿವಾರ ಮಧ್ಯಾಹ್ನ ಆರಂಭವಾಗಿದ್ದು, ಪ್ರತಿಭಟನಾಕಾರರು ರಾತ್ರಿ ಪೂರ್ತಿ ಅಲ್ಲಿಯೇ ತಂಗಿ ಹೋರಾಟ ಮುಂದುವರಿಸಿದ್ದಾರೆ.
ಪ್ರತಿಭಟನೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭಾಗವಹಿಸಿದವರಿಗೆ ಸ್ವಯಂಸೇವಕರು ಆಹಾರ ಮತ್ತು ಕುಡಿಯುವ ನೀರು ವಿತರಿಸುತ್ತಿರುವುದು ಕಂಡುಬಂದಿದೆ.
ಭಾನುವಾರ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿ, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಹೋರಾಟಕ್ಕೆ ಸೇರುವಂತೆ ಮನವಿ ಮಾಡಿದರು.
ಭಾನುವಾರ ಜಂತರ್ ಮಂತರ್‌ನಲ್ಲಿ ಘೋಷಣೆಗಳು, ಭಾಷಣಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಂಬಲಿಗರು ಚಪ್ಪಾಳೆ ತಟ್ಟಿ, ಡಫ್ಲಿ ಬಾರಿಸಿ ದೇಶಭಕ್ತಿ ಗೀತೆಗಳನ್ನು ಹಾಡಿದರು. ಸಂಜೆ ವೇಳೆಗೆ 200ಕ್ಕೂ ಹೆಚ್ಚು ಮಂದಿ ಸೇರಿದ್ದರು ಎಂದು ಆಯೋಜಕರು ಹೇಳಿದ್ದಾರೆ.


